ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Spread the love

ದಕ ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯ‍ರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷ ಆಯ್ಕೆ ಮಾಡಿದ್ದು ಅಧಿಕೃತ ಘೋಷಣೆ ಮಾಡಿದೆ.

ಸಂಘಪರಿವಾರದ ಹಿನ್ನೆಲೆಯ ಕಿಶೋರ್ ಕುಮಾರ್ ಬೊಟ್ಯಾಡಿ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯ ದ.ಕ.‌ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರನ್ನು ಹಿಂದಿಕ್ಕಿ ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments