ದಸ್ತಗಿರಿಗೆ ತೆರಳಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುಖ್ಯಾತ ದನಕಳ್ಳನ ಸೆರೆ

Spread the love

ದಸ್ತಗಿರಿಗೆ ತೆರಳಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುಖ್ಯಾತ ದನಕಳ್ಳನ ಸೆರೆ

ಮಂಗಳೂರು: ಕಮೀಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ಹಾಗೂ ದ ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ದಸ್ತಗಿರಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆತನನ್ನು ದಸ್ತಗಿರಿ ಮಾಡಲು ತೆರಳಿದ ಸಮಯ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್, ಎಂಬಾತನನ್ನು ವಶಕ್ಕೆ ಪಡೆದುಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯ ವಿರುದ್ದ ಮಂಗಳೂರು ನಗರದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಹೆಚ್ಚು ದನಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.


Spread the love