ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನ

ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಅವರಿಂದು ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂರು ಬಾರಿ ದೆಹಲಿಯ ಸಿಎಂ ಆಗಿದ್ದ ಶೀಲಾ ದೀಕ್ಷಿತ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಫೋರ್ಟಿಸ್‌ ಎಸ್ಕಾರ್ಟ್ಸ್‌ ಹಾರ್ಟ್‌ ಇನ್ಸ್‌ಟಿಟ್ಯೂಟ್‌ ಆಸ್ಪತ್ರೆಗೆ ದಾಖಲಿಸಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಪ್ರಸಕ್ತ ದೆಹಲಿ ಕಾಂಗ್ರೆಸ್​ ಅಧ್ಯಕ್ಷೆಯಾಗಿದ್ದ ಶೀಲಾ ದೀಕ್ಷಿತ್, 1998ರಿಂದ 2013ರವರೆಗೆ ದೆಹಲಿಯ ಸಿಎಂ ಆಗಿದ್ದರು. 2014ರಲ್ಲಿ ಕೇರಳದ ಗವರ್ನರ್​, 2019ರಲ್ಲಿ ದೆಹಲಿ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದರು.

ದೆಹಲಿಯ ಯುನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಪದವಿ ಪಡೆದಿದ್ದರು.