ದೀಪಕ್ ರಾವ್ ಕೊಲೆ ಆರೋಪಿ ಪಿಂಕಿ ನವಾಝ್ ಮೇಲೆ ದುಷ್ಕರ್ಮಿಗಳಿಂದ ದಾಳಿ – ಆಸ್ಪತ್ರೆಗೆ ದಾಖಲು

Spread the love

ದೀಪಕ್ ರಾವ್ ಕೊಲೆ ಆರೋಪಿ ಪಿಂಕಿ ನವಾಝ್ ಮೇಲೆ ದುಷ್ಕರ್ಮಿಗಳಿಂದ ದಾಳಿ – ಆಸ್ಪತ್ರೆಗೆ ದಾಖಲು

ಮಂಗಳೂರು: ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಪಿಂಕಿ ನವಾಝ್ (26) ಎಂಬಾತನ ಮೇಲೆ ಬುಧವಾರ ಸಂಜೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ನಡೆದಿದೆ.

ಮಾಹಿತಿಗಳ ಪ್ರಕಾರ ಬುಧವಾರ ಸಂಜೆ ಪಿಂಕಿ ನವಾಝ್ ಕಾಟಿಪಳ್ಳದ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿ ವೇಳೆ ನವಾಝ್ ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಈ ವೇಳೆ ದೇಹದ ವಿವಿಧೆಡೆ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love