ದೇಯಿ ಬೈದತಿ ಔಷದವನಕ್ಕೆ ಸಂಸದ ನಳಿನ್ ನೇತೃತ್ವದಲ್ಲಿ ಧರ್ಮ ರಕ್ಷಾ ಪಾದಯಾತ್ರೆ

Spread the love

ದೇಯಿ ಬೈದತಿ ಔಷದವನಕ್ಕೆ ಸಂಸದ ನಳಿನ್ ನೇತೃತ್ವದಲ್ಲಿ ಧರ್ಮ ರಕ್ಷಾ ಪಾದಯಾತ್ರೆ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ ವಠಾರದಿಂದ ತುಳುನಾಡಿನ ವೀರಪುರಷರಾದ ಕೋಟಿ ಚೆನ್ನಯರ ಹುಟ್ಟೂರಾದ ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಬಡಗನ್ನೂರು ಗ್ರಾಮದ ಮುಡಿಪಿನಡ್ಕದಲ್ಲಿ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಹೆಸರಿನಲ್ಲಿ ನಿರ್ಮಾಣಗೊಂಡ ಔಷದಿವನದ ತನಕ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮರಕ್ಷಾ ಪಾದಯಾತ್ರೆ ನಡೆಯಿತು.

ಕೋಟಿ ಚೆನ್ನಯರ ತಾಯಿಯಾದ ದೈಯಿ ಬೈದೆತಿ ವಿಗ್ರಹವನ್ನು ಅಪಮಾನಿಸಿ ಫೋಟೊ ತೆಗೆದು ಸಾಮಾಜಿಕ ಜಾಲಾತಾಣಗಳಲ್ಲಿ ಹರಡುವ ಮೂಲಕ ಹಿಂದೂ ಸಮಾಜದ ಭಕ್ತರ ಭಾವನೆಗಳಿಗೆ ವಿರುದ್ದವಾಗಿ ವರ್ತಿಸಿದ ವ್ಯಕ್ತಿಗಳ ವಿರುದ್ದ ಹಾಗೂ ಜಿಲ್ಲೆಯ ಶ್ರದ್ಧಾ ಕೇಂದ್ರಗಳ ರಕ್ಷಣೆಯ ಹಿನ್ನಲೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲು ಅವರ ತಂಡ ಬಳಿಕ ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದರು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಅಂಗಾರ, ವಿಧಾನಪರಿಷತ್ ವಿರೋಧ ಪಕ್ಷ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ, ಹಾಗೂ ಇತರರು ಉಪಸ್ಥಿತರಿದ್ದರು.


Spread the love