ದೇರಳಕಟ್ಟೆಯಲ್ಲಿ ಬಸ್ಸಿಗೆ ಕಲ್ಲೆಸೆದ ದುಷ್ಕರ್ಮಿಗಳು, ಆರೋಪಿಯ ಬಂಧನ

Spread the love

ದೇರಳಕಟ್ಟೆಯಲ್ಲಿ ಬಸ್ಸಿಗೆ ಕಲ್ಲೆಸೆದ ದುಷ್ಕರ್ಮಿಗಳು, ಆರೋಪಿಯ ಬಂಧನ

ಮಂಗಳೂರು : ದೇರಳಕಟ್ಟೆ ಜಲಾಲ್ ಭಾಗ್ ಬಸ್ಸು ನಿಲ್ಧಾಣದ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮಂಗಳೂರಿನಿಂದ ವಿಟ್ಲ ಕಡೆಗೆ ಹೋಗುತ್ತಿದ್ದ ಮಣಿಕಂಠ ಎಂಬ ಬಸ್ಸನ್ನು ಅಡ್ಡಗಟ್ಟಿ ಡ್ರೈವರ್ ಮೇಲೆ ಕಲ್ಲೆಸೆದು ಬಸ್ಸಿನ ಗಾಜನ್ನು ಪುಡಿ ಮಾಡಿ ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಆ ನಂತರ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಪದಾಧಿಕಾರಿಗಳು ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ತಕ್ಷಣ ಕಾರ್ಯಪ್ರವೃತ್ತರಾದ ಕೊಣಾಜೆ ಪೊಲೀಸರು ಘಟನೆ ನಡೆದ ಒಂದು ಗಂಟೆಯೊಳಗೆ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಣಾಜೆ ಪೊಲೀಸ್ ಅಧಿಕಾರಿಗಳ ಈ ಕ್ಷಿಪ್ರ ಕಾರ್ಯಾಚರಣೆಯನ್ನು ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು ಮತ್ತು ಕಾರ್ಯದರ್ಶಿ ಜಗದೀಶ್ ನಾಯ್ಕ್ ಶ್ಲಾಘಿಸಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ರಾಯಿಸಿದ್ದಾರೆ.


Spread the love