ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ

Spread the love

ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ತೊಕ್ಕೊಟ ನಿವಾಸಿ ಶನೀಝ್(23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್‌ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು.

ನಗರದ ಪಂಪ್‌ವೆಲ್ ಮೇಲ್ವೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ ಸುಮಾರು 1.01 ಲ.ರೂ. ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love