ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Spread the love

ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವಾ (55) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಇರ್ಶಾದ್ (37) ಎಂದು ಗುರುತಿಸಲಾಗಿದೆ.

ಮಾರ್ಚ್ 21 ರಂದು ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಸ್ಕೂಟರ್ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments