ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ

Spread the love

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ

ಕುಂದಾಪುರ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ.

ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿದ್ದಾರೆ.

ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವೀತಿಯ ಪಿ.ಯು.ಸಿ.ಗೆ ನೇರವಾಗಿ ನಮ್ಮ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.


Spread the love