
Spread the love
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸಂಚಾರ
ಮಂಗಳೂರು: 2023 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯು ಇದೇ ಮಾ. 9 ರ ಗುರುವಾರ ದಿಂದ ಮಾ.29 ರ ಬುಧವಾರದ ವರೆಗೆ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷಾ ದಿನಗಳಂದು ಯಾವುದೇ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿದಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಜಿಲ್ಲೆಯ ಎಲ್ಲಾ ಮಾಲಕರಿಗೆ, ಚಾಲಕರಿಗೆ, ನಿರ್ವಾಹಕರಿಗೆ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪ ಸಾರಿಗೆ ಆಯುಕ್ತರು ಸೂಚಿಸಿದ್ದಾರೆ.
Spread the love