ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಸಾಧನೆ: ಸಚಿವೆ ಡಾ.ಜಯಮಾಲಾ ಸಂತಸ

Spread the love

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಸಾಧನೆ: ಸಚಿವೆ ಡಾ.ಜಯಮಾಲಾ ಸಂತಸ

ಉಡುಪಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದ ಸಾಧನೆಗೈದಿರುವುದು ತನಗೆ ಸಂತಸ ತಂದಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ

ಈ ಶೈಕ್ಷಣಿಕ ಗರಿಮೆ ಕೈಗೂಡುವಲ್ಲಿ ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳ ಪರಿಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಉಡುಪಿ ಜಿಲ್ಲೆಯು ಮೊದಲಿನಿಂದಲೂ ಶೈಕ್ಷಣಿಕ ಸಾಧನೆಗೆ ಹೆಸರುವಾಸಿಯಾಗಿದೆ. ಈ ಹಿರಿಮೆಯನ್ನು ಮುಂದೆಯೂ ಕಾಪಾಡಿಕೊಂಡು ಹೋಗುವಲ್ಲಿ ಯಶಸ್ವಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದವರು ಹಾರೈಸಿದ್ದಾರೆ.


Spread the love