ದ್ವಿತೀಯ ಪಿಯು ಫಲಿತಾಂಶ: ಕ್ಯಾ. ಕಾರ್ಣಿಕ್ ಅಭಿನಂದನೆ

Spread the love

 ದ್ವಿತೀಯ ಪಿಯು ಫಲಿತಾಂಶ: ಕ್ಯಾ. ಕಾರ್ಣಿಕ್ ಅಭಿನಂದನೆ

ಮಂಗಳೂರು: 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣಕನ್ನಡ ಜಿಲ್ಲೆ,  ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆ ಹಾಗೂ ಮೂರನೇ ಸ್ಥಾನವನ್ನು ಪಡೆದ ಕೊಡಗು ಜಿಲ್ಲೆಗಳ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ, ಉಪನ್ಯಾಸಕರಿಗೆ ಹಾಗೂ ಕಠಿಣ ಪರಿಶ್ರಮದ ಮೂಲಕ ಸಾಧನೆಮಾಡಿದ ವಿದ್ಯಾರ್ಥಿಗಳಿಗೆ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿನಂದಿಸಿದ್ದಾರೆ.

ರಾಜ್ಯಕ್ಕೆ ಮಾದರಿಯಾಗಬಲ್ಲ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದ ಜಿಲ್ಲೆಗಳ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಪಠ್ಯಕ್ರಮದ ಚೌಕಟ್ಟಿನಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದ ಕೊಡದೆ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನೀಡದ ಕೊಡುಗೆಯನ್ನು ಸ್ಮರಿಸುತ್ತಾ ಅದ್ಬುತ ಸಾಧನೆಯನ್ನು ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಯಶಸ್ಸು ಹಾಗೂ ಉಜ್ವಲ ಭವಿಷ್ಯ ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.


Spread the love