ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

Spread the love

ದ್ವಿತೀಯ ಪಿಯು ಫಲಿತಾಂಶ ಪ್ರಕಟ , ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ 2022ರ ಫಲಿತಾಂಶವು ಇಂದು ಪ್ರಕಟವಾಗಿದ್ದು, ಶಿಕ್ಷಣ ಸಚಿವ ಬಿಸಿ ನಾಗೇಶ್ ಸುದ್ದಿಗೋಷ್ಠಿ ಆರಂಭಿಸಿದ್ದಾರೆ. ಮೂರು ದಿನಗಳ ಹಿಂದೆಯೇ ಫಲಿತಾಂಶ ಪ್ರಕಟಿಸಬೇಕಿತ್ತು, ಆದರೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದ ಕಾರಣ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲಾಗಿದೆ ಎಂದರು.

ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿಕೊಂಡಿದ್ದರು, 6,83,563 ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 8I ಮೌಲ್ಯ ಮಾಪನ ಕೇಂದ್ರ ಮಾಡಿದ್ದೇವೆ. ಕಡಿಮೆ ದಿನದಲ್ಲಿ ಫಲಿತಾಂಶ ನೀಡುತ್ತಿದ್ದೇವೆ, ಒಟ್ಟು 61.88% ತೇರ್ಗಡೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ, ಚಿತ್ರದುರ್ಗ ಜಿಲ್ಲೆಗೆ ಕೊನೆ ಸ್ಥಾನ ಲಭಿಸಿದೆ

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.


Spread the love