ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು
ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ.
