ದ.ಕ.ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ : ಡಿಸಿ ಡಾ. ರಾಜೇಂದ್ರ

Spread the love

ದ.ಕ.ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ : ಡಿಸಿ ಡಾ. ರಾಜೇಂದ್ರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜು.5ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದರೂ ಕೂಡ ರಾತ್ರಿ 9 ಗಂಟೆಯ ಬಳಿಕ ಕರ್ಫ್ಯೂ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೂಡ ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ಕಾರಣಕ್ಕೂ ನಿರ್ಲಕ್ಷ ಮಾಡಬಾರದು. ಕೋವಿಡ್ 19 ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶವಿಲ್ಲ. ಅಲ್ಲದೆ ಯಾವುದೇ ಸಾಮಾಜಿಕ, ರಾಜಕೀಯ, ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಲಿಗೆ ಅವಕಾಶವಿಲ್ಲ. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಖಾಸಗಿ ಕಚೇರಿಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ:

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೊನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್‌ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್‌‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.


Spread the love