ದ.ಕ ಜಿಲ್ಲೆಯಲ್ಲಿ ರೆಡ್‍ ಅಲರ್ಟ್ – ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ರೆಡ್‍ ಅಲರ್ಟ್ – ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದಲೇ ಭಾರೀ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿವರೆಗೆ) ಅ.25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ.