Home Mangalorean News Kannada News ಧರ್ಮಸ್ಥಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗಳ ದಸ್ತಗಿರಿ

ಧರ್ಮಸ್ಥಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗಳ ದಸ್ತಗಿರಿ

Spread the love

ಧರ್ಮಸ್ಥಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗಳ ದಸ್ತಗಿರಿ

ಮಂಗಳೂರು: ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22) ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42) ಕಳೆಂಜ ನಿವಾಸಿ ಚೇತನ್ (21) ಧರ್ಮಸ್ಥಳ ನಿವಾಸಿ ಶಶಿಧರ್(30) ಮತ್ತು ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂದು ಗುರುತಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ.


Spread the love

Exit mobile version