Home Mangalorean News Kannada News ಧರ್ಮಸ್ಥಳದಲ್ಲಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ವಿಶೇಷ ಪೂಜೆ

ಧರ್ಮಸ್ಥಳದಲ್ಲಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ವಿಶೇಷ ಪೂಜೆ

Spread the love

ಧರ್ಮಸ್ಥಳದಲ್ಲಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ವಿಶೇಷ ಪೂಜೆ

ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಧರ್ಮಸ್ಥಳದಲ್ಲಿ ದೇವರ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.

ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಮುಖ್ಯಮಂತ್ರಿಯವರನ್ನು ಸ್ವಾಗತಿಸಿದರು.

ದೇವರ ದರ್ಶನದ ಬಳಿಕ “ಶ್ರೀ ಸನ್ನಿಧಿ” ಅತಿಥಿ ಗೃಹದಲ್ಲಿ ಭೋಜನ ಸ್ವೀಕರಿಸಿ ನೆರೆ ಸಂತ್ರಸ್ತರಿಗೆ ಪರಿಹಾರದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ತಕ್ಷಣ ಪರಿಹಾರದ ಬಗ್ಯೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.


Spread the love

Exit mobile version