ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ

ಧರ್ಮಸ್ಥಳದಲ್ಲಿ ಸಿ.ಎಂ. ಯಡಿಯೂರಪ್ಪ ವಿಶೇಷ ಪೂಜೆ

ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್ಗೆ ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಸಿ.ಎಂ. ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು.

ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನತೆ ಸುಖ-ಶಾಂತಿ, ನೆಮ್ಮದಿಯಿಂದ ಜೀವಿಸುವಂತೆ ಅನುಗ್ರಹಿಸಬೇಕೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಉಜಿರೆಗೆ ಹೋಗಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿದರು.