ಧಾರವಾಡದ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಅಪಘಾತ : 7 ಮಂದಿ ದುರ್ಮರಣ

Spread the love

ಧಾರವಾಡದ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಅಪಘಾತ : 7 ಮಂದಿ ದುರ್ಮರಣ
 

ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್​ನಲ್ಲಿದ್ದ ಐವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನ್ಯಾಷನಲ್ ಟ್ರಾವೆಲ್ಸ್​ನ KA 51 AA 7146 ನಂಬರ್ ಬಸ್ ಹಾಗೂ MH 16 AY 6916 ಲಾರಿ ಮಧ್ಯೆ ಅಪಘಾತ ನಡೆದಿದೆ. 25ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love