ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರೆ ಕ್ರಮ

Spread the love

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರೆ ಕ್ರಮ

ಮಂಗಳೂರು: ಮಂಗಳೂರು ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನಿಮ್ಮ ಗಮನಕ್ಕೆ ಬಂದಿದ್ದು ಈ ವಿಚಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಇತರೆ ಯಾವುದೇ ಮತ ಧಾರ್ಮಿಕ ವಿಚಾರಗಳಿಗೆ ಸಂಬಂಧ ಪಟ್ಟಂತೆ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿಕೊಳ್ಳುವುದಾಗಲಿ, ಮತ್ತು ಅಭಿಪ್ರಾಯ ವ್ಯಕ್ತ ಪಡಿಸುವುದಾಗಿ ಹಾಗೂ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ..


Spread the love