ನಂತೂರು ಜಂಕ್ಷನ್ ಬಳಿ ಪಲ್ಟಿಯಾದ ಅನಿಲ ಟ್ಯಾಂಕರ್

Spread the love

ನಂತೂರು ಜಂಕ್ಷನ್ ಬಳಿ ಪಲ್ಟಿಯಾದ ಅನಿಲ ಟ್ಯಾಂಕರ್

ಮಂಗಳೂರು: ಅನಿಲ ತುಂಬಿದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿಯೇ ಪಲ್ಟಿಯಾದ ಘಟನೆ ಬುಧವಾರ ಬೆಳಗಿನ ಜಾವ ನಂತೂರು ಜಂಕ್ಷನ್ ಬಳಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಭಾರತ್ ಗ್ಯಾಸ್ ಕಂಪೆನಿಗೆ ಸೇರಿದ ಟ್ಯಾಂಕರ್ ಚಾಲಕನ ಅತೀವೇಗದ ಚಾಲನೆಯಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಗಾಯಗಳಾಗಿಲ್ಲ.

ಸ್ಥಳಕ್ಕೆ ಡಿಸಿಪಿ ಉಮಾಪ್ರಶಾಂತ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ವಾಹನವನ್ನು ಸನ್ನದ್ದ ಸ್ಥಿತಿಯಲ್ಲಿ ಇಡಲಾಗಿದೆ.

ಮುಂಜಾಗೃತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಲ್ಲಿಸಿದ್ದು ಟ್ಯಾಂಕರ್ ತೆರವು ಕಾರ್ಯ ನಡೆಯುತ್ತಿದೆ


Spread the love