ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್

Spread the love

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್

ಮಂಗಳೂರು : ದ.ಕ.ಜಿಲ್ಲೆಯ ಬಂಟ್ವಾಳ ಪುರಸಭೆ, ಉಳ್ಳಾಲ ಮತ್ತು ಪುತ್ತೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ವಿಧಾನಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ನಿಷ್ಕ್ರಿಯ ಸ್ಥಿತಿಯಲ್ಲಿರುವ ಮೈತ್ರಿ ಸರ್ಕಾರದಿಂದ ಜನತೆ ರೋಸಿ ಹೋಗಿದ್ದಾರೆ. ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೇಂದ್ರ ಸರ್ಕಾರದ ಸಾಧನೆಯಿಂದಾಗಿ ಮತದಾರರು ಬಿಜೆಪಿಯತ್ತ ಒಲವು ಹರಿಸಿದ್ದಾರೆ. ಚುನಾವಣೆ ನಡೆಯಲಿರುವ ಮೂರು ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಬಿಜೆಪಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಯಕರ್ತರು ವ್ಯವಸ್ಥಿತ ಪ್ರಚಾರ ಕಾರ್ಯ ನಡೆಸಿದ್ದಾರೆ. ಹಿಂದಿನ ಕಾಂಗ್ರೆಸ್ ಆಡಳಿತದಿಂದ ಬದಲಾವಣೆ ಬಯಸಿರುವ ಮತದಾರರು ಬಿಜೆಪಿಗೆ ಬಹುಮತ ನೀಡುವ ವಿಶ್ವಾಸವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love