ನಮಗೂ ಕೊರೋನಾ ಲಸಿಕೆ ಬೇಕುಃ ಯುವ ಕಾಂಗ್ರೆಸ್ ಆಂದೋಲನ

Spread the love

ನಮಗೂ ಕೊರೋನಾ ಲಸಿಕೆ ಬೇಕುಃ ಯುವ ಕಾಂಗ್ರೆಸ್ ಆಂದೋಲನ

ಕೋವಿದ್ ನಿಂಯತ್ರಣ ಲಸಿಕೆ ಕೇವಲ ಶ್ರೀಮಂತರಿಗೆ ಮಾತ್ರವಲ್ಲ, ನಮಗೂ ಲಸಿಕೆ ಬೇಕು ಎಂಬ ಆಂದೋಲನವನ್ನು ಆರಂಭಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಕಟಿಸಿದೆ.

ಯುವಜನರಿಗೆ, ಗ್ರಾಮೀಣ ಪ್ರದೇಶದ ಜನತೆಗೆ, ಬಡವರಿಗೆ ಕೋವಿದ್ ಲಸಿಕೆ ದೊರೆಯುತ್ತಿಲ್ಲ. ಬಿಜೆಪಿ ಸರಕಾರ ಕೇವಲ ಶ್ರೀಮಂತರಿಗೆ ಮಾತ್ರ ಲಸಿಕೆ ಪೂರೈಸುವ ನೀತಿಯನ್ನು ಅನುಸರಿಸುತ್ತಿದೆ. 18ರಿಂದ 44ರ ವಯಾ ಮಾನದವರಿಗೆ ಲಿಸಿಕೆ ನೀಡುವುದನ್ನು ಸರಕಾರ ಸ್ಥಗಿತ ಮಾಡಿದೆ.ಆದರೆ, ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ದರದಲ್ಲಿ ವಾಕ್ಸಿನ್ ನೀಡಲಾಗುತ್ತಿದೆ. ಜನವಿರೋಧಿ ಲಸಿಕೆ ನೀತಿ ಹೊಂದಿರುವ ಕೇಂದ್ರ ಸರಕಾರದ ವಿರುದ್ಧ ನಮಗೂ ಲಸಿಕೆ ಬೇಕು ಎಂಬ ಆಂದೋಲನವನ್ನು ಯುವಜನತೆ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಪ್ರಕಟಿಸಿದ್ದಾರೆ.

ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ಅವರು ಮಾತನಾಡಿದರು.

ಕೊರೋನಾ ಸೋಂಕು ನಿಯಂತ್ರಣ ಮಾಡಲು ಪ್ರಮುಖ ಆಯುಧವಾದ ಲಸಿಕೆ ನೀತಿ ಸಂಪೂರ್ಣ ವೈಫಲ್ಯವಾಗಿದ್ದು, ಲಸಿಕೆಯ ಪ್ರೈಸಿಂಗ್ ನೀತಿ ಜನವಿರೋಧಿ ಆಗಿದೆ ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ.

ಕೇಂದ್ರ ಸರ್ಕಾರ ಲಸಿಕೆ ಉತ್ಪಾದಿಸುವ ಕಂಪನಿಗಳಿಗೆ ಬೇರೆ ಬೇರೆ ದರ ನಿಗದಿ ಪಡಿಸಲು ಅವಕಾಶ ನೀಡಿರುವುದು ಸರಿಯಲ್ಲ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಖರೀದಿಸಲು ಮೂರು ವಿಧದ ದರಗಳನ್ನು ವಿಧಿಸಿದೆ. ಕೇಂದ್ರ ಸರಕಾರಕ್ಕೆ 150 ರಾಜ್ಯ ಸರಕಾರ 400 (ಕೊವಿಶೀಲ್ದ) ದರಗಳನ್ನು ನಿಗದಿ ಮಾಡಿರುವುದರಿಂದ ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ. ಮಾತ್ರವಲ್ಲದೆ, ಬಡವರು, ಕಾರ್ಮಿಕರು ಮತ್ತು ಮಧ್ಯಮ ವರ್ಗದವರಿಗೆ ಲಸಿಕೆ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೊರೋನಾ ಎರಡನೇ ಅಲೆಯೂ ಹೆಚ್ಚಿನ ಸಂಕಷ್ಟವನ್ನು ಉಂಟು ಮಾಡಲು ನರೇಂದ್ರ ಮೋದಿ ಸರಕಾರದ ಲಸಿಕೆ ನೀತಿಯೇ ಕಾರಣವಾಗಿದೆ. ಸಕಾಲದಲ್ಲಿ ಲಸಿಕೆ ಉತ್ಪಾದನೆಗೆ ಅನುದಾನ ಮತ್ತು ಉತ್ತೇಜನ ನೀಡದೆ ವಿಫಲವಾಗಿರುವುದರಿಂದ ಸಾವಿರಾರು ಮಂದಿ ಜೀವಕಳಕೊಂಡಿದ್ದು, ಇದರ ಜವಾಬ್ದಾರಿಯನ್ನು ಯಾರು ಹೊರುತ್ತಾರೆ ಎಂದವರು ಪ್ರಶ್ನಿಸಿದರು.

ಕೊರೋನಾ 2ನೇ ಅಲೆಯಲ್ಲಿ ಸಾವಿರಾರು ಮಂದಿ ಜೀವಕೊಳ್ಳಲು ಸಕಾಲದಲ್ಲಿ ಆಕ್ಸಿಜನ್ ಮತ್ತ ವೈದ್ಯಕೀಯ ಸೌಲಭ್ಯ ದೊರಯದಿರುವುದೇ ಕಾರಣವಾಗಿದ್ದು, ಇದೊಂದು ಸರಕಾರದ ಬಹುದೊಡ್ಡ ವೈಫಲ್ಯವಾಗಿದೆ ಎಂದು ದೂರಿದರು.

18 ರಿಂದ 44ರ ಹರೆಯದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆಯೇ ಹೊರತು ಈ ವಯೋಮಾನದವರಿಗೆ ಎಲ್ಲಿಯೂ ಲಸಿಕೆ ದೊರೆಯುತ್ತಿಲ್ಲ. ಈ ಹರೆಯದ ಯುವಕರಿಗೆ ಕೂಡಲೇ ಲಸಿಕೆ ನೀಡಬೇಕು. ತಪ್ಪಿದ್ದಲ್ಲಿ ನಮಗೂ ಬೇಕು ಲಸಿಕೆ ಎಂಬ ಆಂದೋಲನ ಮಾಡಲಾಗುವುದು ಎಂದು ಅವರು ಹೇಳಿದರು.

ದೇಶಕ್ಕೆ ದೊರೆತಾಗಿನಿಂದ ಪೊಲಿಯೊ ತನಕ ಎಲ್ಲಾ ಲಸಿಕೆಗಳನ್ನು ಇದುವರೆಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಪೂರೈಸಿದೆ. ಆದರೆ, ನರೇಂದ್ರ ಮೋದಿ ಸರ್ಕಾರದ ದೋಷಪೂರಿತ ನೀತಿಯಿಂದಾಗಿ ಕೇಂದ್ರ-ರಾಜ್ಯ, ಖಾಸಗಿ ಈ ರೀತಿಯಾಗಿ ದುಬಾರಿ ಹಣಕೊಟ್ಟು ಲಸಿಕೆ ಹಾಕಿಸಿಕೊಳ್ಳುವ ಕಟ್ಟ ವ್ಯವಸ್ಥೆ ಮಾಡಲಾಗಿದೆ. ಇದರಿಂದ ದೇಶದ ಕೋಟ್ಯಾಂತರ ಜನರಿಗೆ ಅವರ ಹಕ್ಕಿನ ಲಸಿಕೆ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಕೇಂದ್ರ ಸರ್ಕಾರವೇ ಎಲ್ಲರಿಗೂ ಉಚಿತ ಲಸಿಕೆ ಪೂರೈಕೆ ಮಾಡಬೇಕು ಎಂದರು

ಕೊರೊನಾ ಎರಡನೇ ಅಲೆಯಿಂದಾಗಿ ಯುವಸಮುದಾಯ ಸಹಿತ ಸಾಕಷ್ಟು ಜನರ ಪ್ರಾಣ ಕಳೆದುಕೊಂಡಿದ್ದಾರೆ, ಈ ದುರಂತ ಮೋದಿ ನಿರ್ಮಿತ ಎಂದು ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆರೋಪಿಸಿದ್ದಾರೆ.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ವ್ಯಾಕ್ಸಿನೇಷನ್‌ ವಿಚಾರಲ್ಲಿ ಕೇಂದ್ರೀಕೃತವಾಗಿ ಕ್ರಮ ಕೈಗೊಳ್ಳುವ ಬದಲು ನಿಯಮಗಳನ್ನು ರಾಜ್ಯ ಸರ್ಕಾರಗಳ ಮೇಲೆ ಹೊರಿಸಿ ವಿಕೇಂದ್ರೀಕೃತ ಮಾಡಿತು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ವ್ಯಾಕ್ಸಿನೇಷನ್‌ ಸಿಗುವಂತಾಗಿದ್ದು, ಬ್ಲ್ಯಾಕ್ ಮಾರ್ಕೆಟ್ ಗೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ಆರೋಪಿಸಿದರು.

ಎರಡನೇ ಅಲೆಯಲ್ಲಿ ಗಂಭೀರ ಪರಿಣಾಮ ಎದುರಿಸಲು ಯುಎಸ್ ಸರ್ಕಾರ ವ್ಯಾಕ್ಸಿನೇಷನ್‌ ಗಾಗಿ 40 ಕೋಟಿ ಡಾಲರ್ ಮೀಸಲಿಟ್ಟರೆ, ಭಾರತ ಸರ್ಕಾರ ನಯಾಪೈಸೆ ಮೀಸಲಿಡಲಿಲ್ಲ. ಅಲ್ಲದೆ ವೈಜ್ಞಾನಿಕ ಮನೋಭಾವನೆ ಮತ್ತು ಸಕ್ರಿಯವಾಗಿ ಕೆಲಸ ಮಾಡುವಲ್ಲಿ ವೈಫಲ್ಯ ಕಂಡಿದೆ. ಇದರ ಪರಿಣಾಮವಾಗಿ ಸಾಕಷ್ಟು ಜನ ಪ್ರಾಣ ಕಳೆದುಕೊಂಡಿದ್ದು, ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಪ್ರಶ್ನಿಸಿದರು.

ಕೋವಿಡ್ ಎರಡನೇ ಅಲೆ ದಕ್ಷಿಣ ಕನ್ನಡ ಜಿಲ್ಲೆಗೆ ಬಲವಾದ ಹೊಡೆತ ನೀಡಿದ್ದು, ರಾಜಕೀಯ ಪಕ್ಷವಾಗಿ ಯುವಕಾಂಗ್ರೆಸ್ ನಿರಾಶ್ರಿತರು, ನೊಂದವರಿಗೆ ಸಹಾಯಹಸ್ತ ಚಾಚಿದೆ. ಯುವಕಾಂಗ್ರೆಸ್ ಸಹಾಯವಾಣಿಗೆ 1912 ಕರೆಗಳು ಬಂದಿದ್ದು ಅವುಗಳಲ್ಲಿ ಶೇ.90 ಕರೆಗಳಿಗೆ ಸ್ಪಂದಿಸಲಾಗಿದೆ. 202 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೆ, 99 ಡಿಸ್ಚಾರ್ಜ್, ಆಕ್ಸಿಜನ್ 42, ಔಷಧ 153, ಇಬ್ಬರಿಗೆ ಪ್ಲಾಸ್ಮಾ, 130 ಮಂದಿಗೆ ವ್ಯಾಕ್ಸಿನೇಷನ್‌, 204 ಆಂಬ್ಯುಲೆನ್ಸ್, 94 ಯೂನಿಟ್ ರಕ್ತದ ವ್ಯವಸ್ಥೆ ಮಾಡಿದೆ.

ಜಿಲ್ಲಾದ್ಯಂತ ಬೀದಿಬದಿ ಇರುವ ನಿರಾಶ್ರಿತರ ಸಹಿತ 13,730 ಮಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. 148 ರೋಗಿಗಳಿಗೆ ರಕ್ತದ ವ್ಯವಸ್ಥೆ ಮಾಡಲಾಗಿದ್ದು, ಇವೆಲ್ಲದರ ದಾಖಲೆಗಳು ತಮ್ಮಲ್ಲಿವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರ.ಕಾರ್ಯದರ್ಶಿಗಳಾದ ಸರ್ಫರಾಜ್ ನವಾಝ್, ಆಶಿತ್ ಪಿರೇರಾ, ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಹುಲ್ ಹಮೀದ್, ಜಿಲ್ಲಾ ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, NSUI ರಾಷ್ಟ್ರೀಯ ಸಂಯೋಜಕ ಅನ್ವೀತ್ ಕಟೀಲ್, ನವಾಲ್ ಉಪ್ಪಿನಂಗಡಿ, ಎಂ ತೌಫೀಕ್, ದೀಕ್ಷಿತ್ ಅತ್ತಾವರ್, ರೋಷನ್ ರೈ, ಪ್ರಸಾದ್ ಗಾಣಿಗ, ಹಸನ್ ಡೀಲ್ಸ್, ಮೀನಾ ತೆಲ್ಲಿಸ್, ಇಸ್ಮಾಯಿಲ್ ಸಿದ್ದಿಕ್, ಅರ್ಷದ್ ಮುಲ್ಕಿ, ಫಯಾಜ್ ಅಮೇಮಾರ್, ಅಲ್ಫಾಝ್, ಶಾಫಿ ಕೈಕಂಬ ಮತ್ತು ಇಮ್ರಾನ್ ಶಾಂತಿಅಂಗಡಿ ಉಪಸ್ಥಿತರಿದ್ದರು.


Spread the love