ನರ್ಸಿಂಗ್‌ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Spread the love

ನರ್ಸಿಂಗ್‌ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿನಿಯೋರ್ವಳು ತನ್ನ ಹಾಸ್ಟಲ್‌ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ತುಂಬುನ್‌ ಗಲ್‌ ನಿವಾಸಿ ನೈನಾ(19) ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ನೈನಾ ಇತ್ತೀಚೆಗಷ್ಟೇ ನಗರದ ಕುಲಾಸೊ ನರ್ಸಿಂಗ್‌ ಕಾಲೇಜಿಗೆ ದಾಖಲಾಗಿದ್ದು ಬುಧವಾರ ತನ್ನ ಹಾಸ್ಟೆಲ್‌ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ


Spread the love