ನವೆಂಬರ್ 19ರಂದು  ಮುಖ್ಯಮಂತ್ರಿಗಳ ಮಂಗಳೂರು ಪ್ರವಾಸ 

Spread the love

ನವೆಂಬರ್ 19ರಂದು  ಮುಖ್ಯಮಂತ್ರಿಗಳ ಮಂಗಳೂರು ಪ್ರವಾಸ 

ಮಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. 11 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತೆರಳಿ 2 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು ಎಂದು ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here