ನವೆಂಬರ್ 19:  ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆ 

Spread the love

ನವೆಂಬರ್ 19:  ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆ 

ಮಂಗಳೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ, ಮಂಗಳೂರು ಮಹಾನಗರಪಾಲಿಕೆ ಹಾಗೂ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸಿರು ಸಮಿತಿ(ರಿ)ಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆಯು ನವೆಂಬರ್ 19ರ ಶನಿವಾರ ನಗರದ ಬಾವುಟಗುಡ್ಡೆಯಲ್ಲಿ ಬೆಳಿಗ್ಗೆ 10.30ಕ್ಕೆ ಹಾಗೂ ಸಭಾ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಹುತಾತ್ಮ ಕೆದಂಬಾಡಿ ರಾಮಯ್ಯಗೌಡರ ಶೌರ್ಯದ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡುವರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ಅನುಗ್ರಹ ಸಂದೇಶ ನೀಡುವರು.

ಕನ್ನಡ ಮತ್ತು ಸಂಸ್ಕøತಿ, ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಪ್ರವೇಶ ದ್ವಾರ ಉದ್ಘಾಟಿಸುವರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಪ್ರತಿಮೆ ಪೀಠದ ನಾಮಫಲಕ ಬಿಡುಗಡೆ ಮಾಡುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವರು ಹಾಗೂ ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯಸಭೆಯ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಂದಾಯ ಸಚಿವರಾದ ಆರ್. ಅಶೋಕ, ಮಾಹಿತಿ ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಸಚಿವರಾದ ಸಿ. ಎನ್. ಅಶ್ವತ ನಾರಾಯಣ, ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್, ಸಹಕಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ ಭಾಗವಹಿಸುವರು.

ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮತ್ತು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ಮಹಾಪೌರ ಜಯಾನಂದ ಅಂಚನ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಜೆ.ಸಿ. ಪ್ರಕಾಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪೊನ್ನುರಾಜ್, ಬೆಂಗಳೂರಿನ, ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಜಯರಾಮ್ ಎನ್. ಗೌರವ ಉಪಸ್ಥಿತಿ ವಹಿಸುವರು.


Spread the love

Leave a Reply

Please enter your comment!
Please enter your name here