ನಾಪತ್ತೆಯಾಗಿದ್ದ ಹೋಟೆಲ್ ಉದ್ಯಮಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಹೆಂಡತಿ ಮತ್ತು ಮಗ

Spread the love

ನಾಪತ್ತೆಯಾಗಿದ್ದ ಹೋಟೆಲ್ ಉದ್ಯಮಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಹೆಂಡತಿ ಮತ್ತು ಮಗ

ಉಡುಪಿ: ನಾಪತ್ತೆಯಾಗಿದ್ದ ಉಡುಪಿಯ ಹೋಟೆಲ್ ಉದ್ಯಮಿಯೋರ್ವರು ಕೊಲೆಯಾಗಿದ್ದು, ಆರೋಪಿಗಳು ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿದ ಘಟನೆ ನಡೆದಿದೆ.

ಉಡುಪಿಯ ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಜುಲೈ 28ರಿಂದ ಭಾಸ್ಕರ್ ಶೆಟ್ಟಿ ಕಾಣೆಯಾಗಿದ್ದಾರೆ ಎಂದು ತಾಯಿ ಗುಲಾಬಿ ಶೆಡ್ತಿ ಮಣಿಪಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತಾಯಿ ದೂರು ದಾಖಲಿಸಿ 9 ದಿನಗಳ ಬಳಿಕ ಕೊಲೆ ವಿಚಾರ ಬೆಳಕಿಗೆ ಬಂದಿದ್ದು ಪತ್ನಿ, ಪುತ್ರನಿಂದಲೇ ಕೊಲೆಯಾಗಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಮಣಿಪಾಲ ಪೋಲೀಸರ ಕಾರ್ಯಾಚರಣೆ ವೇಳೆ ಕೊಲೆ ನಡೆದಿರುವ ವಿಚಾರ ಬೆಳಕಿಗೆ ಬಂದಿದ್ದು, ಜ್ಯೋತಿಷಿಯೊಂದಿಗೆ ಸೇರಿ ಶವ ಸುಟ್ಟು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ದಿನದ ಬಳಿಕ ಜ್ಯೋತಿಷಿ ತಲೆಮರೆಸಿಕೊಂಡಿದ್ದು ಈತನ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದೆ.

ನನ್ನ ಮಗ ಭಾಸ್ಕರ್ ಹಾಗೂ ಸೊಸೆ ನಡುವೆ ಸಂಬಂಧ ಚೆನ್ನಾಗಿರಲಿಲ್ಲ. ಹಣಕಾಸು ವಿಚಾರದಲ್ಲಿ ಇವರಿಬ್ಬರ ಮಧ್ಯೆ ಗಲಾಟೆಗಳಾಗುತ್ತಿತ್ತು ಎಂದು ಪೊಲೀಸರಿಗೆ ತಾಯಿ ಗುಲಾಬಿ ದೂರಿನಲ್ಲಿ ಮಾಹಿತಿ ನೀಡಿದ್ದರು.

ಭಾಸ್ಕರ್ ಶೆಟ್ಟಿಯವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಹಾಗೂ ಜ್ಯೋತಿಷಿ ನಿರಂಜನ್ ಭಟ್ಟ ಮೂವರು ಜೊತೆಯಾಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕಾರಣ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿದ ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ಮನೆಗೆ ತೆಗೆದುಕೊಂಡು ಹೋಗಿ ಯಜ್ಞ ಶಾಲೆಯಲ್ಲಿ ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ. ಪೊಲೀಸರ ವಿಚಾರಣೆ ವೇಳೆ ಇಲ್ಲೇ ನಾವು ಭಾಸ್ಕರ್ ಶೆಟ್ಟಿ ಮೃತದೇಹವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ನೀಡಿದ್ದಾರೆ. ಆದರೆ ಘಟನೆ ನಡೆದ ದಿನದಿಂದ ಜ್ಯೋತಿಷಿ ಭಟ್ ಕಣ್ಮರೆಯಾಗಿದ್ದಾರೆ. ಸದ್ಯ ಪೊಲೀಸರು ನಿರಂಜನ್ ಭಟ್ಟನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.


Spread the love