ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಸಾವು

Spread the love

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ‌ಯ ಹಿರಿಯೂರು‌ ತಾಲೂಕಿನ ಜವಗೊಂಡನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ಸದ್ದಾಮ್ ಹುಸೈನ್ (22), ತೌಸಿಫ್ ಅಹಮ್ಮದ್ (24), ಶಾರೂಕ್ (20), ಸದ್ದಾಮ್ (21), ಎಂದು ಗುರುತಿಸಲಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು, ರಸ್ತೆಯಲ್ಲಿ ನಿಂತಿದ್ದ ಲಾರಿಗೆ ನಿಯಂತ್ರಣ ತಪ್ಪಿ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love