ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ – ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು

Spread the love

ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ – ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು

ಮಂಗಳೂರು: ನಿರಂತರವಾದ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ ಕೊನೆಗೂ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ
ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.

ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಅವರು ಹೇಳಿದ್ದಾರೆ


Spread the love

1 Comment

Leave a Reply

Please enter your comment!
Please enter your name here