ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ನಿಧನ

Spread the love

ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ನಿಧನ

ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿದ್ದು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂದು ಮಿತ್ರರನ್ನು ಅಗಲಿರುತ್ತಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮದ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.

ಕಳೆದ ಎರಡು ದಶಕಗಳಿಂದ ಆರ್ ಎಲ್ ಡಾಯಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗು ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿ ಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು. ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಾಯಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.


Spread the love