ನೀರಿನ ಟ್ಯಾಂಕಿಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತ್ಯು

Spread the love

ನೀರಿನ ಟ್ಯಾಂಕಿಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತ್ಯು

ಪುತ್ತೂರು: ಆಟವಾಡುವ ವೇಳೆಯಲ್ಲಿ ಮುಚ್ಚಳವಿಲ್ಲದ ನೀರಿನ ಟ್ಯಾಂಕ್ಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಉಡ್ಡಂಗಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಇಲ್ಲಿನ ಉಡ್ಡಂಗಳ ನಿವಾಸಿ ರವಿಮೂಲ್ಯ ಎಂಬವರ ಪುತ್ರ ಮಿತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿಯ ವಿದ್ಯಾರ್ಥಿ ಜಿತೇಶ್(13), ರವಿಮೂಲ್ಯ ಅವರ ಸಹೋದರ ಹರೀಶ್ ಮೂಲ್ಯ ಎಂಬವರ ಪುತ್ರಿಯರಾದ ಇದೇ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ವಿಸ್ಮಿತ(13) ಮತ್ತು 4ನೇ ತರಗತಿ ವಿದ್ಯಾರ್ಥಿನಿ ಚೈತ್ರ(9) ಮೃತಪಟ್ಟ ಪಟ್ಟವರು.

ಬುಧವಾರ ಸಂಜೆ ವೇಳೆಗೆ ಶಾಲೆಯಿಂದ ಹಿಂದಿರುಗಿದ ಬಳಿಕ ಮನೆಯ ಸಮೀಪದಲ್ಲಿ ಪಂಚಾಯತ್ನ ವತಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ನಿರ್ಮಿಸಲಾಗಿದ್ದ ನೂತನ ನೀರಿನ ಟ್ಯಾಂಕ್ನ ಬಳಿಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಟ್ಯಾಂಕ್ನ ಮೇಲೆ ಹತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಸಂಪ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ


Spread the love