
ನೀರುಮಾರ್ಗದಲ್ಲಿ ವ್ಯಕ್ತಿಯೋರ್ವನಿಗೆ ಹಲ್ಲೆ ಪ್ರಕರಣ: ನಾಲ್ವರನ್ನು ಬಂಧಿಸಿದ ಪೊಲೀಸರು
ಮಂಗಳೂರು: ನೀರುಮಾರ್ಗ ಸಮೀಪದಲ್ಲಿ ಶುಕ್ರವಾರ ಮುಸ್ಸಂಜೆ ವೇಳೆ ಅಡ್ಯಾರ್ ಪದವು ನಿವಾಸಿ ಅಬ್ದುಲ್ ರಿಯಾಝ್ ಅಹ್ಮದ್(40) ಎಂಬವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಡಿಸೆಂಬರ್ 10 ರಂದು ಸಂಜೆ 7:15 ರ ಸುಮಾರಿಗೆ ಅಬ್ದುಲ್ ರಿಯಾಜ್ (40) ತನ್ನ ರಿಟ್ಜ್ ಕಾರಿನಲ್ಲಿ ಹೋಗುತ್ತಿದ್ದಾಗ, ಯುವಕರ ಗುಂಪೊಂದು ಅವರ ಕಾರಿಗೆ ಅಡ್ಡಲಾಗಿ ಕಬ್ಬಿಣದ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿತು. ಹಲ್ಲೆಯಲ್ಲಿ ರಿಯಾಜ್ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಾವು ನಾಲ್ವರನ್ನು ಬಂಧಿಸಿದ್ದೇವೆ ಎಂದರು.ಇನ್ನು ಹಲ್ಲೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಸದ್ಯ ರಿಯಾಜ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.