ನುಡಿದಂತೆ ನಡೆಯದ ಬಿಜೆಪಿ ಸರ್ಕಾರ: ಡಿ.ಕೆ.ಶಿವ ಕುಮಾರ್

Spread the love

ನುಡಿದಂತೆ ನಡೆಯದ ಬಿಜೆಪಿ ಸರ್ಕಾರ: ಡಿ.ಕೆ.ಶಿವ ಕುಮಾರ್

ಚಾಮರಾಜನಗರ: ಬಿಜೆಪಿ 600 ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಪಡೆದ ಬಳಿಕ 550 ಭರವಸೆಗಳನ್ನು ಈಡೇರಿಸಲಿಲ್ಲ. ಅವರಿಗೆ ನುಡಿದಂತೆ’ ನಡೆಯಲು ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸಲ್ಲಿ ವಾಗ್ದಾಳಿ ನಡೆಸಿದರು.

ಚಾಮರಾಜನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಬಳಿ ಆಯೋಜಿಸಿದ್ದ ಪ್ರಜಾಧ್ವನಿ ಬಸ್‌ ಯಾತ್ರೆ, ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಬಿಜೆ 600 ಭರವಸೆಗಳನ್ನು ನೀಡಿತ್ತು. ಆದರೆ, 550 ಭರವಸೆಗಳನ್ನು ಈಡೇರಿಸಲು ಆಗಿಲ್ಲ. ರೈತರ ಆದಾಯ ದ್ವಿಗುಣ ಮಾಡಲಿಲ್ಲ. ರಸಗೊಬ್ಬರ, ಸಿಲಿಂಡರ್ ಸಿಲಿಂಡರ್ ಬೆಲೆ ಏರಿಕೆ ಯಾಗಿದೆ. ಕಳೆದ ಮೂರುವರೆ ವರ್ಷದಿಂದ ಬಿಜೆಪಿ ಆಡಳಿತ ನಡೆಸುತ್ತಿದ್ದು ಭ್ರಷ್ಟಚಾರದಲ್ಲಿ ಮುಳುಗಿದೆ ಎಂದರು.

ಜೆಡಿಎಸ್‌ಗೆ ಎರಡು ಬಾರಿ ಅವಕಾಶ ಸಿಕ್ಕಿದೆ. ಎಚ್.ಡಿ. ದೇವೇಗೌಡರು ಒಂದು ಬಾರಿ ಪ್ರಧಾನಿ, ಒಂದು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲದೇ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಾರಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಗಿತ್ತು. ಆದರೆ, ಜೆಡಿಎಸ್‌ ಅವರು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಇಲ್ಲದೆ 36 ಜನರನ್ನು ಕೊಲೆ ಮಾಡಲಾಗಿದೆ. ಕೆಪಿಸಿಸಿ ವತಿಯಿಂದ ಒಂದು ಲಕ್ಷ ಪರಿಹಾರ ಕೊಡಲಾಗಿತ್ತು. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 36 ಕುಟುಂಬಗಳಿಗೂ ಮೆಡಿಕಲ್ ಕಾಲೇಜಿನಲ್ಲಿ ನೌಕರಿ ಕೊಡಿಸಲಾಗುವುದು. ಡಾ.ಕೆ.ಸುಧಾಕರ್‌ಗೆ ಕಿವಿ, ಕಣ್ಣು, ಹೃದಯ ಇಲ್ಲ. ಈಗಾಗಲೇ ಕಾಂಗ್ರೆಸ್‌ ಪಕ್ಷದಿಂದ ಸರ್ವೆ ಮಾಡಿಸಿದ್ದು ಮುಂಬರುವ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲುತ್ತೇವೆ. ಅಲ್ಲದೇ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲಲ್ಲಿದ್ದೇವೆ ಎ೦ದು ತಿಳಿಸಿದರು.

ಕೆ ಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡಿ, ಪ್ರಜಾಧ್ವನಿ ಜನರ ಧ್ವನಿಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಯಶಸ್ವಿ ಕಾರ್ಯಕ್ರಮವಾಗಿದೆ. ಜಿಲ್ಲೆಯು ಕಾಂಗ್ರೆಸ್ ಪಕ್ಷ ಭದ್ರ ಕೋಟೆ. 2008, 2013ರಲ್ಲಿ ನಾಲ್ಕು ಸ್ಥಾನಗಳನ್ನು ಗಳಿಸಿದ್ದೆವು, ಸರ್ವೆ ಪ್ರಕಾರ ಈ ಬಾರಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 12 ಬಾರಿ ಆಗಮಿಸಿ 10 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಆ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅಲ್ಲದೆ ಜಿಲ್ಲೆಗೆ ಅಂಟಿದ್ದ ಕಳಂಕವನ್ನು ನಿವಾರಿಸಿದ್ದಾರೆ. ಆಕ್ಸಿಜನ್ ದುರಂತದಿಂದ ಮೃತಪಟ್ಟ 36 ಕುಟುಂಬಗಳಿಗೆ ತಲಾ 1 ಲಕ್ಷ ಪರಿಹಾರ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ತೋರಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೇರಳ ಶಾಸಕ ರೋಜರಿ ಜಾನ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನಪರಿಷತ್‌ ಸದಸ್ಯ ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಮಾಜಿ ಶಾಸಕರಾದ ಎಸ್.ಜಯಣ್ಣ, ಎ.ಆರ್.ಕೃಷ್ಣಮೂರ್ತಿ, ಎಸ್.ಬಾಲರಾಜ್, ಯುವ ಮುಖಂಡ ಗಣೇಶ್ ಪ್ರಸಾದ್‌ ಸೇರಿದಂತೆ ಇತರರಿದ್ದರು.


Spread the love