ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ಮಂಗಳೂರು: ನೂತನವಾಗಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಬುಧವಾರ ಬೆಳಗ್ಗೆ ಬಿಜೆಪಿಯ ನೂರಾರು ಕಾರ್ಯಕರ್ತರು ಧಾರಾಕಾರ ಮಳೆಯ ನಡುವೆ ಮಂಗಳೂರು ನಗರ ಹೊರಭಾಗದ ಕಂಕನಾಡಿ ರೈಲ್ವೇ ಜಂಕ್ಷನ್ ಬಳಿ ಚಂಡೆ ವಾದ್ಯ, ಘೋಷದೊಂದಿಗೆ ಸ್ವಾಗತಿಸಿದರು.

ನಂತರ ನಳಿನ್ ಕುಮಾರ್ ಕಟೀಲ್ ಅವರು ತನ್ನ ಸ್ವಗೃಹಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದು, ಮನೆಯವರೊಂದಿಗೆ ಸಿಹಿಯನ್ನು ಹಂಚಿಕೊಂಡರು.