ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

Spread the love

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಇವರೊಂದಿಗೆ ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಿದರು.

ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಕೆಜೆ ಜಾರ್ಜ್ ಮತ್ತು ಎಂಬಿ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಪ್ಪ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

 ಇನ್ನು ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

 


Spread the love

Leave a Reply

Please enter your comment!
Please enter your name here