ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಕೈಹಾಕಿ ಪೋಸ್ ಕೊಟ್ಟಿದ್ರಿ: ಮೋದಿಗೆ ಕುಟುಕಿದ ಪ್ರಿಯಾಂಕಾ

Spread the love

ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಕೈಹಾಕಿ ಪೋಸ್ ಕೊಟ್ಟಿದ್ರಿ: ಮೋದಿಗೆ ಕುಟುಕಿದ ಪ್ರಿಯಾಂಕಾ

ನವದೆಹಲಿ: ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣವನ್ನು ಕಾಂಗ್ರೆಸ್ ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹಗರಣವನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಜೊತೆ ಮೋದಿ ಫೋಟೋಗೆ ಪೋಸ್ ಕೊಟ್ಟ ಘಟನೆಯನ್ನು ಉಲ್ಲೇಖಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದಾರೆ. ಆದರೂ ಮೋದಿ ಸುಮ್ಮನಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯ ಪೋಸ್ಟ್ವೊಂದರಲ್ಲಿ ಹೇಳಿದ್ದಾರೆ.

ಪ್ರಧಾನಿಗಳು ಈ ನಾಯಕನ ಭುಜದ ಮೇಲೆ ಕೈ ಹಾಕಿ ಫೋಟೋಗೆ ಪೋಸ್ಟ್ ಕೊಟ್ಟಿದ್ದರು. ಚುನಾವಣೆಗೆ 10 ದಿನದ ಹಿಂದೆ ಈ ನಾಯಕನ ಪರವಾಗಿ ಪ್ರಧಾನಿ ಪ್ರಚಾರಕ್ಕೆ ಹೋಗುತ್ತಾರೆ. ವೇದಿಕೆಯಲ್ಲಿ ಹಾಡಿ ಹೊಗಳುತ್ತಾರೆ. ಇವತ್ತು ಕರ್ನಾಟಕದ ಆ ನಾಯಕ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆ ವ್ಯಕ್ತಿಯ ಘೋರ ಅಪರಾಧಗಳ ಬಗ್ಗೆ ಕೇಳಿದರೇ ಸಾಕು ಹೃದಯ ನಡುಗುತ್ತದೆ. ಆ ವ್ಯಕ್ತಿ ನೂರಾರು ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಆದರೂ ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?’ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.


Spread the love

Leave a Reply