ನೆಲಮಂಗಲದಲ್ಲಿ ಭೀಕರ ಅಪಘಾತ: ಬಾಲಕಿ ಸೇರಿ ಐವರ ದುರ್ಮರಣ

Spread the love

ನೆಲಮಂಗಲದಲ್ಲಿ ಭೀಕರ ಅಪಘಾತ: ಬಾಲಕಿ ಸೇರಿ ಐವರ ದುರ್ಮರಣ

ನೆಲಮಂಗಲ: ಭೀಕರ ರಸ್ತೆ ಅಪಘಾತದಿಂದಾಗಿ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ನಡೆದಿದೆ.

ಕೆಎಸ್​​​ಆರ್​​ಟಿಸಿ ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಅಪಘಾತಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕಿ ಸಾವನ್ನಪ್ಪಿದ್ದಾರೆ. ಇವರು ಒಂದೇ ಕುಟುಂಬದವರು ಎನ್ನಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಬಸ್​ಗೆ ಹಾಸನ ಮಾರ್ಗದಲ್ಲಿ ಬರುತ್ತಿದ್ದ ಕಾರು ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್​ನಲ್ಲಿದ್ದ 35 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಗಳೂರು ಗ್ರಾಮಾಂತರ ಎಸ್ಪಿ ಸುಜಿತ್ ಭೇಟಿ ನೀಡಿದ್ದಾರೆ.


Spread the love