ನೆಲ್ಯಾಡಿ: ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು
ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜೋರ್ಜ್ (16) ಮೃತಪಟ್ಟಿದ್ದಾನೆ.
ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ.ಜೋರ್ಜ್ ಅವರ ಪುತ್ರ. ಗುರುವಾರ ತಡರಾತ್ರಿ 1 ಗಂಟೆ ವೇಳೆಗೆ ನೆಲ್ಯಾಡಿ ಕರ್ಬಸಂಕದ ಸಮೀಪ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅನ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
