ನೆಲ್ಯಾಡಿ: ಬೆಂಕಿ ಹಚ್ಚಿಕೊಂಡು  ಯುವತಿ ಆತ್ಮಹತ್ಯೆ

Spread the love

ನೆಲ್ಯಾಡಿ: ಬೆಂಕಿ ಹಚ್ಚಿಕೊಂಡು  ಯುವತಿ ಆತ್ಮಹತ್ಯೆ

ನೆಲ್ಯಾಡಿ : ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದೆ.

ನೆಲ್ಯಾಡಿ ನವೀನ್ ಇಂಟರ್‌ಲಾಕ್ ಮಾಲಕ, ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಯುವತಿ.

ಕಳೆದ ಶೈಕ್ಷಣಿಕ ಸಾಲಿನಲ್ಲಿ  ಬಿಬಿಎ ಪದವಿ ಮುಗಿಸಿದ್ದ ನವ್ಯಾ ಬಳಿಕ ಮನೆಯಲ್ಲಿದ್ದರು. ರವಿವಾರ ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ ಇಂದು ಬೆಳಗ್ಗೆ 8 ಗಂಟೆಯಾದರೂ ಬಾಗಿಲು ತೆರೆಯದೇ ಇದ್ದ ಹಿನ್ನೆಲೆಯಲ್ಲಿ ಆಕೆಯ ಮೊಬೈಲ್‌ಗೆ ತಾಯಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಬಳಿಕ ತಂದೆ ವಿ.ಜೆ.ಜೋಸೆಫ್ ಬಾಗಿಲು ಮುರಿದು ಒಳ ಪ್ರವೇಶಿಸಿದ ವೇಳೆ ನವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ದೂರಲಾಗಿದೆ.

ಆಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.


Spread the love

1 Comment

Comments are closed.