ನೇಗಿನಹಾಳದ ಗುರು ಮಡಿವಾಳೇಶ್ವರ ಸ್ವಾಮೀಜಿ ಆತ್ಮಹತ್ಯೆ

Spread the love

ನೇಗಿನಹಾಳದ ಗುರು ಮಡಿವಾಳೇಶ್ವರ ಸ್ವಾಮೀಜಿ ಆತ್ಮಹತ್ಯೆ

ಬೈಲಹೊಂಗಲ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ.

ಇಂದಿನಂತೆ ಸೋಮವಾರ ಬೆಳಿಗ್ಗೆ ಅವರ ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೂರ್ಣ ತನಿಖೆಯ ನಂತರ ಸಾವಿನ ರೀತಿ ಗೊತ್ತಾಗಲಿದೆ. ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ರಾತ್ರಿ 12ರವರೆಗೂ ಶ್ರೀಗಳು ಭಕ್ತರ ಜತೆಗೆ ಮಾತನಾಡಿದ್ದರು. ಎಂದಿನಂತೆ ಸಹಜವಾಗಿಯೇ ಇದ್ದರು. ನಂತರ ಮಲಗಲು ಅವರ ಕೋಣೆಗೆ ಹೋಗಿದ್ದರು.


Spread the love

Leave a Reply

Please enter your comment!
Please enter your name here