ನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ

Spread the love

ನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ

ಮಂಗಳೂರು: ಮಹಿಳೆಯೋರ್ವರು ತನ್ನ ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ

ಅಡ್ಯಾರ್ ಪದವು ನಿವಾಸಿ ಚೈತ್ರ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತರು

ಚೈತ್ರಾ ಮತ್ತು ಆಕೆಯ ಮಗು ದಿಯಾಂಶ್ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದು ಸಂಜೆ ವೇಳೆ ತಾಯಿ ಮತ್ತು ಮಗುವಿನ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ.

ಗುರುವಾರವಷ್ಟೇ ತನ್ನ ಒಂದು ವರ್ಷದ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದ ಚೈತ್ರ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ಇನ್ನಷ್ಟೇ ತಿಳಿಯಬೇಕಾಗಿದೆ.


Spread the love

Leave a Reply