ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Spread the love

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮೃತ ಬಾಲಕನನ್ನು ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ ಎಂದು ಗುರುತಿಸಲಾಗಿದೆ.

ಸಲ್ಮಾನ್ ತನ್ನ ಇತರ ಗೆಳೆಯರೊಂದಿಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love