ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು

Spread the love

ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು: ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು (ಬುಧವಾರ) ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀನ್ (21)ಎಂದು ಗುರುತಿಸಲಾಗಿದೆ.

 ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಝ್‌ವೀನ್ ದ್ವಿಚಕ್ರ ವಾಹನ ಆ್ಯಕ್ಸಸ್‌ನಲ್ಲಿ ತೆರಳುತ್ತಿದ್ದಾಗ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಎನ್ನಲಾಗಿದೆ. ಹಾಗಾಗಿ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳಕೊಂಡು ಮೀನು ಸಾಗಾಟದ  ವಾಹನಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌. ಇದರಿಂದ ಸವಾರ ಅಝ್‌ವೀನ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಸಮೀಪದ ಆಸ್ಲತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಸವಾರ ಅಝ್‌ವೀನ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ‌.

ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love