ನೇತ್ರಾವತಿ ಸೇತುವೆಯಲ್ಲಿ ಆಟೋ ಗೆ ಕಾರು ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

Spread the love

ನೇತ್ರಾವತಿ ಸೇತುವೆಯಲ್ಲಿ ಆಟೋ ಗೆ ಕಾರು ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

ಮಂಗಳೂರು: ಆಟೋ ರಿಕ್ಷಾಕ್ಕೆ ಹಿಂದಿನಿಂದ ಕಾರೊಂದು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ -66ರ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಜೀರು ನಿವಾಸಿ ಸಂಜೀವ ಪೂಜಾರಿ ಪುತ್ರ, ಆಟೋ ಚಾಲಕಶ್ಯಾಮ್ ಪ್ರಸಾದ್ (45)  ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಘಟನೆಗೆ ಕಾರು ಚಾಲಕನ ಅತಿ ವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.

ಘಟನೆಯಲ್ಲಿ ಆಟೋ ರಿಕ್ಷಾದಿಂದ ಹೊರಗೆಸೆಯಲ್ಪಟ್ಟ ಚಾಲಕ ಕಾರಿನ ಅಡಿಗೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ರಿಕ್ಷಾ ಚಾಲಕನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ


Spread the love