ನೈತಿಕ ಪೊಲೀಸ್‌ ಗಿರಿ! –  ಒಟ್ಟಾಗಿ ಪ್ರಯಾಣಿಸುತ್ತಿದ್ದ  ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಐವರ ಬಂಧನ

Spread the love

ನೈತಿಕ ಪೊಲೀಸ್‌ ಗಿರಿ! –  ಒಟ್ಟಾಗಿ ಪ್ರಯಾಣಿಸುತ್ತಿದ್ದ  ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಐವರ ಬಂಧನ

ಮಂಗಳೂರು: ಜೊತೆಯಾಗಿ ಒಂದೇ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ನಗರದ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್‌ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್‌ ಟೋಲ್‌ ಗೇಟ್‌ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ  ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಸಂಘಟನೆಯ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಲು ಮುಂದಾಗಿರುವುದು ಕೂಡ ಕಂಡು ಬಂದಿದ್ದು ಆ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರತ್ಕಲ್‌ ಪೊಲೀಸರು ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.


Spread the love

Leave a Reply