ನೈತಿಕ ಪೊಲೀಸ್ ಗಿರಿ ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ? ಡಿಸಿಪಿ ಎದುರು ಹಾಜರಾಗಲು ಸೂಚನೆ

Spread the love

ನೈತಿಕ ಪೊಲೀಸ್ ಗಿರಿ ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ? ಡಿಸಿಪಿ ಎದುರು ಹಾಜರಾಗಲು ಸೂಚನೆ

ಮಂಗಳೂರು: ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದೀಗ ಈ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್ ನೀಡಿದೆ.

ಇಂದು (ಜು.21) ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ಗಳಿಂದ ಗಡಿಪಾರಿಗೆ ವರದಿಯನ್ನು ಕೇಳಲಾಗಿದೆ.

ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾತನಾಡಿ ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ನೀಡಲಾಗಿದೆ ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅಸ್ತಿತ್ವಕ್ಕೆ ಬಂದಿತ್ತು ಅದರಂತೆ ನೈತಿಕ ಪೊಲೀಸ್ಗಿರಿ ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾ ಇಟ್ಟಿದ್ದ ತಂಡ ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಪ್ರಕ್ರಿಯೆಗೆ ಚಾಲನೆ ನೀಡಿದೆ.


Spread the love