ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

Spread the love

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಕುಂಜತ್ ಬೈಲು ನಿವಾಸಿ ರಾಜ, ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ (36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣಾ ಸಮಯ ಹಾಜರಾಗದೇ 2017 ಇಸವಿಯಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಂಬಾತನನ್ನು ಬೆಂಗಳೂರಿನಿಂದ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.

ಈತನು ಈ ಹಿಂದೆ 2013 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆಗೆ ಯತ್ನಿಸಿದ ಪ್ರಕರಣ, ಕಾರಾಗೃಹದಲ್ಲಿ ನಡೆದ ಹಲ್ಲೆ ಪ್ರಕರಣ, ನ್ಯಾಯಾಲಯದ ಆವರಣದಲ್ಲಿ ನಡೆದ ಕೊಲೆ ಯತ್ನ, ಜೀವ ಬೆದರಿಕ ಪ್ರಕರಣಗಳಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಮಾನ್ಯ ನ್ಯಾಯಾಲಯವು ಎಲ್ ಪಿ ಸಿ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಈತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಮಯ ಬೆಂಗಳೂರಿನಲ್ಲಿ ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ನಕಲಿ ದಾಖಲೆಯನ್ನು ಸೃಷ್ಠಿಸಿ ಹೆಸರು ಮತ್ತು ವಿಳಾಸವನ್ನು ಬದಲಾಯಿಸಿ ಆಧಾರ್ ಕಾರ್ಡ್ ನ್ನು ಪಡೆದು ಈ ಮೂಲಕ ಸಿಮ್ ಕಾರ್ಡ್ ನ್ನು ಪಡೆದು ಉಪಯೋಗಿಸುತ್ತಿದ್ದನು. ಅಲ್ಲದೇ ಈತನು 2022 ನೇ ಇಸವಿಯಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


Spread the love

Leave a Reply

Please enter your comment!
Please enter your name here