ನ.24-26: ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ತರಬೇತಿ ಶಿಬಿರ

Spread the love

ನ.24-26: ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ತರಬೇತಿ ಶಿಬಿರ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ದಿನಾಂಕ: 24.11.2022 ರಿಂದ 26.11.2022ರ ವರೆಗೆ ಮೂರು ದಿನಗಳ ಕಾಲ ಜಿಲ್ಲಾ ಮಟ್ಟದ ತರಬೇತಿ ಶಿಬಿರವನ್ನು ಮಂಗಳೂರು ಪಿಲಿಕುಲದಲ್ಲಿರುವ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಭವನದಲ್ಲಿ ಆಯೋಜಿಸಲಾಗಿದೆ.

ನ.24 ರಂದು ಬೆಳಿಗ್ಗೆ 9.30ಕ್ಕೆ ಕೆಪಿಸಿಸಿ ಸೇವಾದಳದ ರಾಜ್ಯಾಧ್ಯಕ್ಷರಾದ ಎಂ.ರಾಮಚಂದ್ರ ಅವರು ಧ್ವಜಾರೋಹಣ ಗೆಯ್ಯಲಿರುವರು, ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ನೆರವೇರಿಸಲಿರುವರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷರು, ದ.ಕ. ಜಿಲ್ಲಾ ಉಸ್ತುವಾರಿಯಾದ ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಸಂಸದರಾದ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಮಿಥುನ್ ರೈ, ನಾಯಕರಾದ ಡಾ.ರಘು, ಜಿಲ್ಲಾ ಕಾಂಗ್ರೆಸ್ ಸೇವಾದಳ ಉಸ್ತುವಾರಿಗಳಾದ ಶಮೀರ್ ಪಜೀರ್, ತೆರೆಸಾ ವಿಕ್ಟರ್ ಭಾಗವಹಿಸಲಿರುವರು.

ನ.26 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ವಸಂತ ಬಂಗೇರಾ, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜಾ, ಪಿ.ವಿಮೋಹನ್, ಮಾಜಿ ಶಾಸಕರಾದ ಮೊಯ್ದೀನ್ ಬಾವ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾ ಇಬ್ರಾಹೀಂ ಕೋಡಿಜಾಲ್ ಅವರು ಉಪಸ್ಥಿತಲಿರುವರು.

ಕಾಂಗ್ರೆಸ್ ಪಕ್ಷದ ಆಶಯ, ಪರಿಚಯ, ನಾಯಕತ್ವ, ಇತಿಹಾಸ, ಸೇವಾಮನೋಭಾವನೆಗಳ ಬಗ್ಗೆ ರಾಜ್ಯ ಮಟ್ಟದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಈ ಶಿಬಿರದಲ್ಲಿ ಕೆಪಿಸಿಸಿಯ ಪದಾಧಿಕಾರಿಗಳು, ಸಂಯೋಜಕರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು-ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು-ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ರಾಜ್ಯ ಮಟ್ಟದ ವಕ್ತಾರರು ಹಾಗೂ ನಾಯಕರುಗಳು ಭಾಗವಹಿಸಲಿರುವರು. ಶಿಬಿರಾರ್ಥಿಗಳಿಗೆ ಸಂಪೂರ್ಣ ಉಚಿತ ಊಟ, ವಸತಿ ವ್ಯವಸ್ಥೆಯನ್ನು ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here