ನ. 25 ರಂದು ಅಮಲು ಪದಾರ್ಥ ಮಾರಾಟ ಮಾಡದಂತೆ ಆದೇಶ

Spread the love

ನ. 25 ರಂದು ಅಮಲು ಪದಾರ್ಥ ಮಾರಾಟ ಮಾಡದಂತೆ ಆದೇಶ

ಮಂಗಳೂರು :ವಿಶ್ವ ಹಿಂದೂ ಪರಿಷತ್ತು, ಭಜರಂಗದಳ ಮತ್ತಿತರ ಸಂಘಟನೆಗಳ ವತಿಯಿಂದ ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣದ ಕುರಿತು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನವೆಂಬರ್ 25 ರಂದು ಬೃಹತ್ ಜನಾಗ್ರಹ ಸಭೆ ನಡೆಯಲಿದ್ದು, ಈ ಸಭೆಗೆ ವಿಶ್ವ ಹಿಂದೂ ಪರಿಷತ್ತು, ಭಜರಂಗದಳ ಮತ್ತಿತರ ಸಂಘಟನೆಗಳ ಸುಮಾರು 10 ಸಾವಿರ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಅವರು ನವೆಂಬರ್ 25 ರಂದು ಪೂರ್ವಾಹ್ನ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಹಾಗೂ ಯಾವುದೇ ವಿಧದ ಅಮಲು ಪದಾರ್ಥ ಮಾರಾಟ ಮಾಡದಂತೆ ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.


Spread the love